ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‍ನಲ್ಲಿ ಪಾಕಿಸ್ತಾನಿ ಪ್ರಜೆ ಸೇರಿದಂತೆ ಇಬ್ಬರು ಲಷ್ಕರ-ಎ-ತೊಯ್ಬಾ ಉಗ್ರರು ಹತರಾಗಿದ್ದಾರೆ. ಶ್ರೀನಗರ ನಗರದ ಬೆಮಿನಾ ಪ್ರದೇಶದಲ್ಲಿ ತಡರಾತ್ರಿ ನಿಷೇತ ಭಯೋತ್ಪಾದಕ ಸಂಘಟನೆ ಎಲ್ ಇಟಿಯ ಇಬ್ಬರು ಭಯೋತ್ಪಾದಕರು ಅಡಗಿರುವ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಬಲಿಯಾದರೆ ಒಬ್ಬ ಪೊಲೀಸ್ ಸಿಬ್ಬಂಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್ಕೌಂಟರ್ ಸ್ಥಳದಿಂದ ವಶಪಡಿಸಿಕೊಂಡ ದಾಖಲೆಗಳು ಮತ್ತು ಇತರ ದೋಷಾರೋಪಣೆ ಸಾಮಗ್ರಿಗಳ ಪ್ರಕಾರ, ಹತರಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಪಾಕಿಸ್ತಾನದ ಫೈಸಲಾಬಾದ್ ನಿವಾಸಿ ಅಬ್ದುಲ್ಲಾ ಗೌಜ್ರಿ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.
ಇದೇ ಭಯೋತ್ಪಾದಕರ ಗುಂಪು ಸೋಪೋರ್‍ನಲ್ಲಿ ತಪ್ಪಿಸಿಕೊಂಡಿದ್ದರು ನಾವು ಅವರ ಚಲನವಲನವನ್ನು ಪತ್ತೆಹಚ್ಚಿದ್ದೇವೆ ಎಂದು ಹೇಳಿದರು. ಹತ್ಯೆಗೀಡಾದ ಇನ್ನೊಬ್ಬ ಉಗ್ರನನ್ನು ಅನಂತನಾಗ್ ಜಿಲ್ಲಾಯ ನಿವಾಸಿ ಆದಿಲ್ ಹುಸೇನ್ ಮಿರ್ ಅಲಿಯಾಸ್ ಸುಫಿಯಾನ್ ಎಂದು ಗುರುತಿಸಲಾಗಿದೆ. ಪೊಲೀಸ್ ದಾಖಲೆಗಳ ಪ್ರಕಾರ, ಈತ 2018 ರಲ್ಲಿ ವಾಘಾದಿಂದ ಭೇಟಿ ವೀಸಾದಲ್ಲಿ ಪಾಕಿಸ್ತಾನಕ್ಕೆ ಹೋಗಿದ್ದ ಎಂದು ಕುಮಾರ್ ಹೇಳಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB