nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೆಪ್ಟೆಂಬರ್ ಮೊದಲ ವಾರದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವ: ಆ.26ರಂದು ಶ್ರೀ ಕೃಷ್ಣ ಜಯಂತಿ
    ತುಮಕೂರು August 13, 2024

    ಸೆಪ್ಟೆಂಬರ್ ಮೊದಲ ವಾರದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವ: ಆ.26ರಂದು ಶ್ರೀ ಕೃಷ್ಣ ಜಯಂತಿ

    By adminAugust 13, 2024No Comments2 Mins Read
    tumakuru

    ತುಮಕೂರು:  ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಕುಳುವ ಸಮಾಜದ ಮುಖಂಡರ ಮನವಿ ಮೇರೆಗೆ ಈ ತೀರ್ಮಾನ ತೆಗೆದುಕೊಳ್ಳಲಾಯಿತು.

    ಕಾರ್ಯಕ್ರಮಕ್ಕೆ ರಾಜ್ಯ ಸಚಿವರು ಪಾಲ್ಗೊಳ್ಳಲಿರುವುದರಿಂದ ಆಗಸ್ಟ್ 19ರಂದು ಆಚರಿಸಬೇಕಿದ್ದ ಜಿಲ್ಲಾ ಮಟ್ಟದ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ  ಬೆಳಿಗ್ಗೆ 11:30 ಗಂಟೆಗೆ ಆಚರಿಸಲು ಅನುವು ಮಾಡಿಕೊಡಬೇಕೆಂದು  ಕುಳುವ ಸಮಾಜ ಮುಖಂಡರೆಲ್ಲ ಒಮ್ಮತದಿಂದ ಸಭೆಗೆ ಮನವಿ ಮಾಡಿದರು.

    ಮನವಿಗೆ ಒಪ್ಪಿಗೆ ಸೂಚಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಟೌನ್ ಹಾಲ್ ವೃತ್ತದಿಂದ ಎಂ.ಜಿ. ರಸ್ತೆ ಮಾರ್ಗವಾಗಿ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೂ ಶ್ರೀ ನುಲಿಯ ಚಂದಯ್ಯ ಅವರ  ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಬೇಕು.  ಮೆರವಣಿಗೆಯಲ್ಲಿ ಅತ್ಯುತ್ತಮ ಕಲಾ ಪ್ರದರ್ಶನ ನೀಡುವ ತಂಡಗಳನ್ನು ನಿಯೋಜಿಸಬೇಕು.  ಶ್ರೀ ನುಲಿಯ ಚಂದಯ್ಯ ಅವರ ಬಗ್ಗೆ ಉತ್ತಮ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಿದರು.

    ಶ್ರೀ ನುಲಿಯ ಚಂದಯ್ಯ  ಜಯಂತಿ ಕಾರ್ಯಕ್ರಮವನ್ನು ಎಲ್ಲ ತಾಲೂಕುಗಳಲ್ಲಿಯೂ ಕಡ್ಡಾಯವಾಗಿ ಆಚರಿಸಿ ಅವರ ವಚನಾಮೃತದ ಸಾರವನ್ನು ಸಾರ್ವಜನಿಕರಿಗೆ ತಿಳಿಸಬೇಕೆಂದರಲ್ಲದೆ   ಸಮುದಾಯದ 5 ಮಂದಿ ಸಾಧಕರನ್ನು ಗುರುತಿಸಿ ಗೌರವಿಸಬೇಕು. ಅತೀ ಹೆಚ್ಚು ಅಂಕಗಳಿಸಿದ ಎಸ್‌ಎಸ್‌ ಎಲ್‌ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪುರಸ್ಕರಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ, ಕುಳುವ ಸಮಾಜದ ವಿವಿಧ ಮುಖಂಡರು ಹಾಜರಿದ್ದರು.

    ಆ.26ರಂದು ಶ್ರೀ ಕೃಷ್ಣ ಜಯಂತಿ:

    ನಂತರ ಜರುಗಿದ ಆಗಸ್ಟ್ 26ರ  ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನುದ್ದೇಶಿಸಿ  ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ  ಜಯಂತಿ ಕಾರ್ಯಕ್ರಮವನ್ನು ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಯಂತಿ ಅಂಗವಾಗಿ ಆಗಸ್ಟ್ 26ರ ಬೆಳಿಗ್ಗೆ 11 ಗಂಟೆಗೆ ಟೌನ್ ಹಾಲ್ ವೃತ್ತದಿಂದ ರಂಗಮಂದಿರದವರೆಗೆ ಶ್ರೀ ಕೃಷ್ಣನ ಭಾವಚಿತ್ರ ಮೆರವಣಿಗೆ, ಮೆರವಣಿಗೆಗೆ ಕಲಾತಂಡ ನಿಯೋಜನೆ, ಮಧ್ಯಾಹ್ನ 1 ಗಂಟೆಗೆ ವೇದಿಕೆ ಕಾರ್ಯಕ್ರಮ, ಉಪನ್ಯಾಸ, ಸಮಾಜದ ಹಿರಿಯ 5 ಮಂದಿಗೆ ಸನ್ಮಾನಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.

    ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಕಗ್ಗದ ಪದ, ಹೆತ್ತಪ್ಪ-ಜುಂಜಪ್ಪ ಪದ, ಕೋಲಾಟದ ಪದ, ಸೋಬಾನೆ ಪದಗಳನ್ನು ಹಾಡುವ ಕಾಡುಗೊಲ್ಲ ಕಲಾವಿದರಿಗೆ ಅವಕಾಶ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಿದರು.

    ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ, ಯಾದವ ಸಮಾಜದ ವಿವಿಧ ಮುಖಂಡರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೆಂಗಳೂರು: ಬಿಡದಿಯಲ್ಲಿ ರೈತರು ಯಾರೂ ರಸ್ತೆ ತಡೆ ನಡೆಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದು, ಟೌನ್‌ ಶಿಪ್‌ ಬೇಡವಾದವರು…

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.