ತುಮಕೂರು: ತುಮಕೂರಿನ ವಿವಾದಿತ ಸಿದ್ದಿವಿನಾಯಕ ಮಾರುಕಟ್ಟೆ ಪ್ರದೇಶಕ್ಕೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿದ್ಧಿ ವಿನಾಯಕ ದೇವಸ್ಥಾನದ ಇರುವ ಆವರಣದಲ್ಲಿ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ಈಗಾಗಲೇ ಯೂಟಿಲಿಟಿ ಮಲ್ಟಿಪರ್ಪಸ್ ಮಾಲ್ ನಿರ್ಮಾಣ ಸಂಬಂಧ ಈಗಾಗಲೇ ಸಚಿವ ಪರಮೇಶ್ವರ್ ಶಂಕು ಸ್ಥಾಪನೆಯನ್ನು ನೆರವೇರಿಸಿದ್ದಾರೆ.
ಪಾಲಿಕೆಯ ಈ ನಿರ್ಧಾರಕ್ಕೆ ಬಿಜೆಪಿ ಮುಖಂಡರು ಬಾರಿ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ವಿವಾದ ಭುಗಿಲೆದಿದೆ. ಹೀಗಾಗಿ ಇಂದು ಇಂದು ಸಿದ್ದಿವಿನಾಯಕ ದೇವಸ್ಥಾನಕ್ಕೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪೂಜೆ ಸಲ್ಲಿಸಿ ಪರಿಶೀಲನೆ ನಡೆಸಿದರು.
ಸ್ಥಳೀಯ ವ್ಯಾಪಾರಸ್ಥರಿಂದ ಮಾಹಿತಿ ಪಡೆದ ಮುತಾಲಿಕ್, ದೇವಸ್ಥಾನ ಸ್ಥಳಾಂತರಿಸಿದ್ರೆ ಹೋರಾಟದ ಎಚ್ಚರಿಕೆ ನೀಡಿದರಲ್ಲದೇ ಇದರ ವಿರುದ್ಧ ಹೋರಾಟ ಮಾಡುವಂತೆ ಸ್ಥಳೀಯರಿಗೆ ಮನವಿ ಮಾಡಿದರು.
ಸಿದ್ದವಿನಾಯಕ ಮಾರುಕಟ್ಟೆ ಆವರಣದಲ್ಲಿ ಮಾಲ್ ನಿರ್ಮಿಸಲು ಮುಂದಾಗಿರುವ ಸರ್ಕಾರ ಮುಂದಾಗಿದೆ. ಈ ಬಗ್ಗೆ ಖಾಸಗಿ ವ್ಯಕ್ತಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರ ವಿರುದ್ಧ ಕಳೆದ ಹಲವು ದಿನಗಳಿಂದ ಹೋರಾಟ ಆರಂಭಗೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296