ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಬ್ರಾಹ್ಮಣ ಸಭಾ, ಶ್ರೀ ಶಂಕರ ಸೇವಾ ಸಮಿತಿ ಸಹಯೋಗದಲ್ಲಿ ಮೇ 2ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಶ್ರೀ ಶಂಕರಾಚಾರ್ಯ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಸಮಾಜದ ಗಣ್ಯರು, ವಿವಿಧ ಸಮುದಾಯದ ಮುಖಂಡರು ಭಾಗವಹಿಸಲಿದ್ದು, ಕಾರ್ಯಕ್ರಮ ಕುರಿತು ಜಿಲ್ಲಾ ಬ್ರಾಹ್ಮಣ ಸಭಾ ಸಂಸ್ಥೆಯ ಉಪಾಧ್ಯಕ್ಷ ಹಾಗೂ ಶೃಂಗೇರಿ ಶಂಕರ ತತ್ವ ಪ್ರಸಾರ ಅಭಿಯಾನದ ಎಂ.ಕೆ. ನಾಗರಾಜರಾವ್ ಉಪನ್ಯಾಸ ನೀಡಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW