nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಿದ್ಧಗಂಗಾ ಕ್ಷೇತ್ರ : ವೈವಿಧ್ಯಮಯ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಸಿದ್ಧತೆ ಕೈಗೊಳ್ಳಲು ಸೂಚನೆ
    ತುಮಕೂರು December 18, 2024

    ಶ್ರೀ ಸಿದ್ಧಗಂಗಾ ಕ್ಷೇತ್ರ : ವೈವಿಧ್ಯಮಯ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಸಿದ್ಧತೆ ಕೈಗೊಳ್ಳಲು ಸೂಚನೆ

    By adminDecember 18, 2024No Comments2 Mins Read
    siddaganga

    ತುಮಕೂರು: ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ 2025ರ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ 15 ದಿನಗಳ ಕಾಲ ನಡೆಯಲಿರುವ ವಸ್ತು ಪ್ರದರ್ಶನವನ್ನು ವೈವಿಧ್ಯಮಯವಾಗಿ ಜನಮೆಚ್ಚುವಂತೆ ಏರ್ಪಡಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚಿಸಿದರು.

    ಶ್ರೀ ಸಿದ್ಧಗಂಗಾ ಮಠದಲ್ಲಿ ಬುಧವಾರ ಸಂಜೆ ನಡೆದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಸ್ತುಪ್ರದರ್ಶನವು ಜಿಲ್ಲೆಯ ಸಮಗ್ರ ಚಿತ್ರಣವನ್ನು ನೀಡುವಂತಿರಬೇಕು. ಕೃಷಿ, ಅರಣ್ಯ, ತೋಟಗಾರಿಕೆ, ಆರೋಗ್ಯ, ಕೈಗಾರಿಕೆ, ಪಶುವೈದ್ಯ, ರೇಷ್ಮೆ, ಮೀನುಗಾರಿಕೆ, ಶಿಕ್ಷಣ, ಜವಳಿ ಮತ್ತು ಕೈಮಗ್ಗ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕ್ರೀಡಾ, ಪ್ರವಾಸೋದ್ಯಮ, ಕಾರ್ಮಿಕ, ವಾರ್ತಾ ಇಲಾಖೆಗಳು ಮಳಿಗೆಗಳನ್ನು ತೆರೆದು ವಿದ್ಯಾರ್ಥಿಗಳು, ಕೃಷಿಕರು, ಕೈಗಾರಿಕೋದ್ಯಮಿಗಳು, ಜನಸಾಮಾನ್ಯರಿಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಹಾಗೂ ಇಲಾಖೆಗಳು ನೀಡುವ ಸವಲತ್ತುಗಳ ಬಗ್ಗೆ ಜನಪರ ಮಾಹಿತಿಯನ್ನು ಈ ವಸ್ತುಪ್ರದರ್ಶನದಲ್ಲಿ ನೀಡಬೇಕು ಎಂದು ತಿಳಿಸಿದರು.

    ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದು, ಅನಾನುಕೂಲವಾಗದಂತೆ ಕುಡಿಯುವ ನೀರು, ರಾತ್ರಿ ವೇಳೆಯಲ್ಲಿ ಬೆಳಕಿನ ವ್ಯವಸ್ಥೆ ಸೇರಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಲ್ಲದೆ, ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಮೈದಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೋಹನ್ ಅವರಿಗೆ ಸೂಚನೆ ನೀಡಿದರು.

    ವಸ್ತುಪ್ರದರ್ಶನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುವಂತಹ ಗಣಿತ, ವಿಜ್ಞಾನ, ಕ್ರೀಡೆಗಳನ್ನು ಏರ್ಪಡಿಸಬೇಕು. ಕೈಮಗ್ಗ ಉತ್ಪನ್ನ, ಕಲಾಕೃತಿಗಳು, ಕರಕುಶಲ ವಸ್ತುಗಳು ಮತ್ತು ದೇಶೀಯ ವಸ್ತುಗಳ ಈ ಪ್ರದರ್ಶನವು ಜಾತ್ರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಬೇಕು. ಯಶಸ್ವಿ ಕೈಗಾರಿಕೋದ್ಯಮಿಗಳು ಮತ್ತು ಮಹಿಳಾ ಉದ್ಯಮಿಗಳು ಭಾಗವಹಿಸುವಂತೆ ಉತ್ತೇಜಿಸಬೇಕು ಎಂದರಲ್ಲದೆ, ಕೃಷಿ ಕ್ಷೇತ್ರದ ತಾಂತ್ರಿಕತೆ, ಆಧುನಿಕತೆ, ವೈವಿಧ್ಯಮಯ ಬೆಳೆ ತಳಿಗಳ ಪ್ರಾತ್ಯಕ್ಷಿಕೆ, ಸಮಗ್ರ ಬೆಳೆ ನಿರ್ವಹಣೆ, ಕೃಷಿ ಉಪಕರಣಗಳು, ಇತ್ತೀಚಿನ ಕೃಷಿ ಅಭಿವೃದ್ಧಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಹಾಗೂ ಕಡಿಮೆ ನೀರಿನಲ್ಲಿ ಹೆಚ್ಚಿನ ಇಳುವರಿ ಬೆಳೆಯುವ ಬೆಳೆ, ತಂತ್ರಜ್ಞಾನ ಆಧಾರಿತ ಕೃಷಿ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

    ವಸ್ತುಪ್ರದರ್ಶನದಲ್ಲಿ ಪ್ರತಿ ದಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆಗಳು ಕ್ರಮವಹಿಸಬೇಕೆಂದು ತಿಳಿಸಿದರಲ್ಲದೆ, ವಸ್ತುಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಮಾಹಿತಿ ನೀಡಲು ಅನುವಾಗುವಂತೆ ಇಲಾಖೆಗಳ ಮಳಿಗೆಗಳಿಗೆ ಪಾಳಿ ಆಧಾರದ ಮೇಲೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ನಿರ್ದೇಶನ ನೀಡಿದರು.

    ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ವಿವಿಧ ಇಲಾಖೆಗಳ ಅಧಿಕಾರಿಗಳು ವಸ್ತುಪ್ರದರ್ಶನಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

    ಶ್ರೀ ಸಿದ್ಧಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಟ್ರಸ್ಟ್ನ ಜಂಟಿ ಕಾರ್ಯದರ್ಶಿ ಎಸ್.ಶಿವಕುಮಾರ್ ಸ್ವಾಗತಿಸಿದರು. ಶ್ರೀ ಸಿದ್ಧಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ, ಕಾರ್ಯದರ್ಶಿ ಡಿ. ಗಂಗಾಧರಯ್ಯ, ಜಂಟಿ ಕಾರ್ಯದರ್ಶಿ ಕೆ.ಬಿ. ರೇಣುಕಯ್ಯ, ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    Comments are closed.

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.