ಹಾಸನ: ಶ್ರೀ ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಮೊದಲನೇ ದಿನವಾದ ಇಂದು ದೇವಸ್ಥಾನದ ಬಾಗಿಲು ತೆರೆಯುವ ಕಾರ್ಯಕ್ರಮದಲ್ಲಿ ಸಚಿವ ಕೆ.ಎನ್.ರಾಜಣ್ಣ ಭಾಗಿಯಾಗಿ ದೇವಿಯ ಕೃಪೆಗೆ ಪಾತ್ರರಾದರು.
ಆದಿಚುಂಚನಗಿರಿ ಮಠದ ಪರಮಪೂಜ್ಯ ಗುರುಗಳಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ರವರು ಹಾಗೂ ಶ್ರೀ ಕ್ಷೇತ್ರ ಸಿದ್ದಗಂಗಾ ಮಠದ ಪರಮಪೂಜ್ಯ ಗುರುಗಳಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ.ಪಟೇಲ್, ಶಾಸಕರುಗಳಾದ ಸ್ವರೂಪ್ ಪ್ರಕಾಶ್, ಶಿವಲಿಂಗೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿಯಾದ ಸತ್ಯಭಾಮ, ಸಿ.ಇ.ಓ ಪೂರ್ಣಿಮ, ಪೊಲೀಸ್ ಅಧೀಕ್ಷಕರಾದ ಮಹಮ್ಮದ್ ಸುಜೀತಾ ಸೇರಿದಂತೆ ವಿವಿಧ ಮಠಾಧೀಶರು, ಮುಖಂಡರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


