ಪಾವಗಡ: 2025 ಫೆಬ್ರವರಿ 8 ಮತ್ತು 9 ನೇ ತಾರೀಕು ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುವ ಐತಿಹಾಸಿಕ ವಾಲ್ಮೀಕಿ ಜಾತ್ರೆಯಲ್ಲಿ ಪಾವಗಡ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವಂತೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮನವಿ ಮಾಡಿದರು.
ಪಾವಗಡ ತಾಲ್ಲೂಕು ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ನಡೆಸಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವಾಲ್ಮೀಕಿ ಸಮುದಾಯದ ಜಾಗೃತಿಗಾಗಿ ಜಾತ್ರೆಯನ್ನು ಹಮ್ಮಿಕೊಂಡಿದ್ದು, ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪಾವಗಡ ತಾಲೂಕು ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಕರವೇ ಲಕ್ಷ್ಮೀನಾರಾಯಣ್ ಹಾಗೂ ಸಹ ಸಂಚಾಲಕರಾಗಿ ಬೇಕರಿನಾಗರಾಜ್ ಅವರನ್ನು ಆಯ್ಕೆ ಮಾಡಲಾಯಿತು.
ನಿಕಟಪೂರ್ವ ವಾಲ್ಮೀಕಿ ಜಾತ್ರಾ ಸಮಿತಿಯ ಅಧ್ಯಕ್ಷ ಕಸಬಾ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಮೂರ್ತಿರವರು ಇಂದಿನ ವರ್ಷ ವಾಲ್ಮೀಕಿ ಜಾತ್ರೆಗೆ ಬಂದಿರುವ ದೇಣಿಗೆ ವಿವರವನ್ನು ಸಭೆಯಲ್ಲಿ ತಿಳಿಸಿದರು.
ಪೂರ್ವಭಾವಿ ಸಭೆಯಲ್ಲಿ ಮುಖಂಡರುಗಳಾದ. ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳೇಗಾರ್ ಲೋಕೇಶ್, ಪಾವಗಡ ಪಟ್ಟಣ ವಾಲ್ಮೀಕಿ ಯುವಕರ ಸಂಘದ ಅಧ್ಯಕ್ಷ ನರಸಿಂಹ ಕೃಷ್ಣ, ವಾಲ್ಮೀಕಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಡಿ.ಸಿ.ಸಿ .ಬ್ಯಾಂಕ್ ಶ್ರೀನಿವಾಸ್. ಮುಖಂಡರಾದ ಹರ್ಷ ಈರಣ್ಣ, ಗುತ್ತಿಗೆದಾರ ಕೆ.ಟಿ .ಹಳ್ಳಿ ಮಂಜುನಾಥ್ (ಎಂ.ಎಲ್.ಎ.), ಹನುಮಂತರಾಯಪ್ಪ, ದಿವಾಕರ್, ಬ್ಯಾಡನೋರು ಶಿವು, ಆಟೋ ಸತ್ತಿ, ನಾಗರಾಜ್ , ರಘು, ಮಂಜುನಾಥ್, ರಮೇಶ್ ಮುಂತಾದವರು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx