ತುಮಕೂರು: ಚಿಕ್ಕವಯಸ್ಸಿನಲ್ಲಿಯೇ ಗಣಿತಕ್ಷೇತ್ರದಲ್ಲಿಅಸಾಧಾರಣ ಸಾಧನೆ ಮಾಡಿ ವಿಶ್ವದಾದ್ಯಂತಗಣಿತ ಪ್ರಿಯರ ಹೃದಯಗೆದ್ದ ಭಾರತೀಯ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಬದುಕು ಎಲ್ಲರಿಗೂ ಮಾದರಿ ಎಂದು ಕುವೆಂಪು ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ ಬಿ.ಜೆ.ಗಿರೀಶ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಗಣಿತ ಶಾಸ್ತ್ರ ದಿನಾಚರಣೆಯಲ್ಲಿ ಮಾತನಾಡಿದರು.
ಶ್ರೀನಿವಾಸ ರಾಮಾನುಜನ್ ಅವರಜೀವನ, ಕೃತಿಗಳು ಮತ್ತುಗಣಿತ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳ ಬಗ್ಗೆ ತಿಳಿಸಿದರು. ಬದುಕಿದರೆ ಸಾವಿರಾರು ವರ್ಷಗಳು ಬದುಕುವಂತಹ ಸಾಧನೆ ಮಾಡಬೇಕೆಂದುಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣಿತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ.ಚಂದ್ರಾಲಿ ಬೈಷ್ಯ ವಹಿಸಿದ್ದರು. ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ.ಪಾಟೀಲ್ ಮಲ್ಲಿಕಾರ್ಜುನ್ ಬಿ., ಸಹಾಯಕ ಪ್ರಾಧ್ಯಾಪಕರಾದ ಡಾ.ಬೋರೆಗೌಡ ಎಚ್.ಎಸ್., ಡಾ.ನರಹರಿ ಎನ್. ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx