ತುಮಕೂರು: 2025–26ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಹತ್ವದ ಸಭೆ ನಡೆಸಿದರು.
ಜಿಪಂ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ಧತಾ ಪರೀಕ್ಷೆ 1 ಮತ್ತು 2 ರಲ್ಲಿ ಶೇಕಡ 50ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯ ಶಿಕ್ಷಕರುಗಳು, ಡಿಡಿಪಿಐ, ಬಿಇಒಗಳೊಂದಿಗಿನ ಸಭೆಯಲ್ಲಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.
ಜೊತೆಗೆ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂಡುಬಂದ ನ್ಯೂನತೆಗಳ ಕುರಿತು ಚರ್ಚಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


