ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ SSLC ಪರೀಕ್ಷಾ ಫಲಿತಾಂಶದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಬಾರಿ ಸುಮಾರು 45 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಲು ಪ್ರಮುಖ ಕಾರಣವೇನು ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.
ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಪರೀಕ್ಷಾ ಅಕ್ರಮ ಹಾಗೂ ನಕಲು ಮಾಡುವುದಕ್ಕೆ ಬ್ರೇಕ್ ಹಾಕಲಾಗಿತ್ತು. ಇದರಿಂದಾಗಿ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಸಾಧ್ಯವಾಯಿತು ಎಂದು ಸಚಿವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಬಾರಿ ಶೇ. 10ರಷ್ಟು ಕೃಪಾಂಕವನ್ನು ನೀಡಲಾಗಿತ್ತು. ಇಷ್ಟಾದರೂ ಸಹ 45 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಾಧ್ಯವಾಗಿಲ್ಲ ಎಂಬುದು ಗಮನಾರ್ಹ ಎಂದರು.
ಕೇವಲ ಫಲಿತಾಂಶದ ಸಂಖ್ಯೆ ಹೆಚ್ಚಿಸುವುದು ನಮ್ಮ ಗುರಿಯಲ್ಲ, ಬದಲಾಗಿ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವುದು ಸರ್ಕಾರದ ಉದ್ದೇಶವಾಗಿದೆ. ನಕಲು ಮುಕ್ತ ಪರೀಕ್ಷೆ ನಡೆಸಿದ್ದರಿಂದ ನಿಜವಾದ ಕಲಿಕೆಯ ಮಟ್ಟ ಏನೆಂಬುದು ತಿಳಿಯಲು ಸಹಕಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಅವರಿಗೆ ಪೂರಕ ಪರೀಕ್ಷೆಗಳ ಮೂಲಕ ಮತ್ತೊಮ್ಮೆ ಉತ್ತೀರ್ಣರಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


