ಬೆಂಗಳೂರು: 2021-2022ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ. ಇಂದು ಮಲ್ಲೇಶ್ವರದಲ್ಲಿರುವ ಫ್ರೌಡಶಾಲಾ ಪರೀಕ್ಷಾ ಮಂಡಳಿಯಲ್ಲಿ ನಿಗದಿಪಡಿಸಿದ್ದ ಪತ್ರಿಕಾಗೋಷ್ಟಿ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಚಿವ ಬಿ.ಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ.
ಒಟ್ಟು 8,53,436 ಮಂದಿ ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 7,30,881 ಮಂದಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 3,72,279 ವಿದ್ಯಾರ್ಥಿನಿಯರು, 3,58,602 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇನ್ನು ಒಟ್ಟು 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ಇನ್ನು 309 ವಿದ್ಯಾರ್ಥಿಗಳು 625ಕ್ಕೆ 624 ಅಂಕ ಪಡೆಯುವ ಮೂಲಕ 2ನೇ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳು ಫಲಿತಾಂಶವನ್ನು http://kseeb.kar.ini.in ಅಥವಾ http://sslc.karnataka.gov.in ಅಥವಾ http://karresults.nic.in. ಮೂಲಕ ವೀಕ್ಷಿಸಬಹುದಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5