ಬೆಂಗಳೂರು: 2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ–1 ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ಸ್ವಲ್ಪ ಗೊಂದಲ ಇತ್ತು. ಪರೀಕ್ಷೆಯ ಪಾವಿತ್ರತ್ಯೆ ಕಾಪಾಡಬೇಕು ಅಂತ ವೆಬ್ ಕಾಸ್ಟಿಂಗ್ ಮಾಡಿದ್ದೇವೆ. ಕಳೆದ ವರ್ಷ 53% ಫಲಿತಾಂಶ ಬಂದಿತ್ತು. ನಾವು ಗ್ರೇಸ್ ಮಾರ್ಕ್ಸ್ ಕೊಟ್ಟ ಮೇಲೆ 73% ಗೆ ಬಂತು. ಸಿಎಂ ಸಿದ್ದರಾಮಯ್ಯ ಕೂಡ ಇದರ ಬಗ್ಗೆ ಮಾತನಾಡಿದ್ದರು. ಆದಾದ ಮೇಲೆ ಟಾರ್ಗೆಟ್ ಕೊಟ್ಟರು. ಇಲಾಖೆಯಿಂದ ಒಳ್ಳೆಯ ರಿಸಲ್ಟ್ ಬರುವ ರೀತಿಯಲ್ಲಿ ಮಾಡುವಂತೆ ಹೇಳಿದ್ದರು ಎಂದರು.
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ(ಶೇ.89.96), ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ(ಶೇ.83.19), ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.29), ಕೊಡಗು ಜಿಲ್ಲೆಗೆ 5ನೇ ಸ್ಥಾನ(ಶೇ.82.21), ಕಲಬುರಗಿ ಕೊನೆಯ ಸ್ಥಾನ(ಶೇ42.43) ಪಡೆದುಕೊಂಡಿದೆ. ಫಲಿತಾಂಶ https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW