ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೋವಿಡ್-19 ನಿಯಮಾವಳಿ ಪಾಲನೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡೇ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ.ಕೋವಿಡ್-19 ನಿಯಮಾವಳಿ ಪಾಲನೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗುತ್ತದೆ.
ಎಸೆಸೆಲ್ಸಿ ಪರೀಕ್ಷೆಯನ್ನು ಸುವ್ಯವಸ್ಥಿತ ಹಾಗೂ ಅಚ್ಚುಕಟ್ಟಾಗಿ ನಡೆಸುವ ಉದ್ದೇಶದಿಂದ ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರಿಗೆ ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಮಾಡಿ ಪರೀಕ್ಷಾ ಕೇಂದ್ರ ರಚಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy