nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

    March 17, 2026
    Facebook Twitter Instagram
    ಟ್ರೆಂಡಿಂಗ್
    • ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ
    • ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ
    • ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ
    • ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ
    • ‘ಸೆರಗ ಸರ್ಸೆ’ ಹಾಡಿನ ವಿವಾದ: ಫಿಲ್ಮ್ ಚೇಂಬರ್‌ ಗೆ ಮಹಿಳಾ ಆಯೋಗದಿಂದ ಪತ್ರ
    • ತಿಪಟೂರಿನಲ್ಲಿ ಅಡುಗೆ ಅನಿಲ ಅಭಾವ: ಸಿಲಿಂಡರ್‌ ಗಾಗಿ ಗ್ರಾಹಕರ ಹೈರಾಣು
    • ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!
    • ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ
    ರಾಜ್ಯ ಸುದ್ದಿ March 17, 2026

    ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ

    By adminMarch 17, 2026No Comments1 Min Read
    siddaramaiah

    ಬೆಂಗಳೂರು: ರಾಜ್ಯಾದ್ಯಂತ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ನಾಳೆ, ಮಾರ್ಚ್ 18ರಿಂದ ಆರಂಭವಾಗಲಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಹಾರೈಸಿದ್ದಾರೆ.

    ವಿಧಾನಸಭೆಯಲ್ಲಿ ಇಂದು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪ್ರಸಕ್ತ ಸಾಲಿನಲ್ಲಿ 8,65,968 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ನಾವು ಜಾರಿಗೆ ತಂದಿರುವ ಸುಧಾರಣೆಗಳಿಂದಾಗಿ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ಒಂದು ವೇಳೆ ಮೊದಲ ಹಂತದಲ್ಲಿ ಅನುತ್ತೀರ್ಣರಾದರೂ, 2 ಮತ್ತು 3ನೇ ಹಂತದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಅವಕಾಶವಿದೆ. ಹೀಗಾಗಿ ಮಕ್ಕಳು ಧೈರ್ಯವಾಗಿ ಪರೀಕ್ಷೆ ಎದುರಿಸಿ,” ಎಂದು ಹಾರೈಸಿದರು.


    Provided by
    Provided by

    ಒತ್ತಡ ಮುಕ್ತ ಪರೀಕ್ಷೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, “ಹಿಂದೆ ಮಕ್ಕಳು ಪರೀಕ್ಷೆ ಎಂದರೆ ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದರು. ಆದರೆ ಈಗ ಮೂರು ಹಂತದ ಪರೀಕ್ಷಾ ವ್ಯವಸ್ಥೆ ಇರುವುದರಿಂದ ಆ ಭಯ ದೂರವಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷಾ ಕೇಂದ್ರಕ್ಕೆ ಬನ್ನಿ,” ಎಂದು ತಿಳಿಸಿದರು.

    ಪೋಷಕರಿಗೆ ಆರ್. ಅಶೋಕ್ ಕಿವಿಮಾತು: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕೂಡ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಜೊತೆಗೆ ಪೋಷಕರಿಗೆ ವಿಶೇಷ ಮನವಿ ಮಾಡಿದ ಅವರು, “ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಅಂಕ ಗಳಿಸುವಂತೆ ಒತ್ತಡ ಹೇರಿ ಮಾನಸಿಕ ಹಿಂಸೆ ನೀಡಬಾರದು,” ಎಂದು ಕಿವಿಮಾತು ಹೇಳಿದರು.

    ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ವದಂತಿಗಳ ಬಗ್ಗೆ ಆರ್. ಅಶೋಕ್ ಆತಂಕ ವ್ಯಕ್ತಪಡಿಸಿದರು. ಈ ಬಗ್ಗೆ ಶಿಕ್ಷಣ ಸಚಿವರು ಕೂಡಲೇ ಸುದ್ದಿಗೋಷ್ಠಿ ನಡೆಸಿ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಎಚ್ಚರಿಕೆ ನೀಡಬೇಕು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲ ನಿವಾರಿಸಬೇಕು ಎಂದು ಅವರು ಒತ್ತಾಯಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

    March 17, 2026

    ‘ಸೆರಗ ಸರ್ಸೆ’ ಹಾಡಿನ ವಿವಾದ: ಫಿಲ್ಮ್ ಚೇಂಬರ್‌ ಗೆ ಮಹಿಳಾ ಆಯೋಗದಿಂದ ಪತ್ರ

    March 17, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026

    ಬಳ್ಳಾರಿ:  ಜಿಲ್ಲಾ ಕೇಂದ್ರದಲ್ಲಿ ಮಾ.23 ರಂದು ದೇವರ ದಾಸಿಮಯ್ಯ ಜಯಂತಿ, ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾ.31 ರಂದು…

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

    March 17, 2026

    ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ

    March 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.