ಕೊರಟಗೆರೆ : SSLC ಮರುಮೌಲ್ಯಮಾಪನ ಫಲಿತಾಂಶದಲ್ಲಿ ರವೀಂದ್ರ ಭಾರತಿ ಪ್ರೌಢಶಾಲೆ ವಿದ್ಯಾರ್ಥಿ ಸೃಜನ್ ಎಂ.ಎನ್ 620(99.2%) ಅಂಕದೊಂದಿಗೆ ರಾಜ್ಯಕ್ಕೆ ಆರನೇ ರ‍್ಯಾಂಕ್, ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದು ಸಂಸ್ಥೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾನೆ.
ಮೇ 2ರಂದು ಕರ್ನಾಟಕ ಪ್ರೌಢ ಶಿಕ್ಷಣಾ ಮಂಡಳಿಯಿಂದ ಬಿಡುಗಡೆಗೊಂಡ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಪನಕ್ಕೆ ಶಾಲೆಯ 4 ಮಂದಿ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದರು.
ಈ ವಿದ್ಯಾರ್ಥಿಗಳಲ್ಲಿ ಸೃಜನ್ ಎಂ.ಎನ್ ಹಿಂದಿ, ಗಣ ತ, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ, ಉಳಿದ ಮೂರು ವಿಷಯಗಳಲ್ಲಿ ಕನ್ನಡ 123 , ಇಂಗ್ಲೀಷ್ 99, ಸಮಾಜ ವಿಜ್ಞಾನ 98 ಒಟ್ಟು 620 ಅಂಕ ಪಡೆದಿದ್ದಾನೆ. ರಾಜ್ಯಕ್ಕೆ 6 ನೇ ರ‍್ಯಾಂಕ್ ಪಡೆದು ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಯ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.
ಉಳಿದ ಮೂರು ವಿದ್ಯಾರ್ಥಿಗಳಲ್ಲಿ ವರ್ಷಿಣ ಟಿ.ವಿ 603 ಅಂಕ, ದೀಕ್ಷಿತ ಜಿ.598 ಅಂಕ, ಸಾತ್ವಿಕ್ 518 ಅಂಕ ಪಡೆದಿದ್ದು, ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ರವೀಂದ್ರ ಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಆರ್.ಮಲ್ಲಿಕಾರ್ಜುನ್, ಉಪಾಧ್ಯಕ್ಷೆ ಉಮಾ ಜಗದೀಶ್ವರ, ಕಾರ್ಯದರ್ಶಿ ಶೋಭಾ ಕೃಷ್ಣಮೂರ್ತಿ, ಸಹ ಕಾರ್ಯದರ್ಶಿ ನವೀನ್‌ಕುಮಾರ್, ಖಚಾಂಚಿ ಆದಿ ರಮೇಶ್, ಪ್ರೌಢಶಾಲೆ ಮುಖ್ಯಶಿಕ್ಷಕ ಲಕ್ಷ್ಮಯ್ಯ, ನರಸಿಂಹಮೂರ್ತಿ ಹಾಗೂ ಬೋಧಕ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿ ಶುಭಕೋರಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW