ಪಾವಗಡ: ಎಸ್.ಎಸ್.ಎಲ್.ಸಿ. ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಸರಳೀಕರಣಗೊಳಿಸುವಂತೆ ಆಗ್ರಹಿಸಿ ಪಾವಗಡ ಪ್ರೌಢಶಾಲಾ ವಿಜ್ಞಾನ ವಿಷಯ ಶಿಕ್ಷಕರ ವೇದಿಕೆಯು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಇಂದ್ರಾಣಮ್ಮ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ವೆಂಕಟೇಶ್.ಜಿ ರವರಿಗೆ ಮನವಿ ಸಲ್ಲಿಸಿತು.
ಮನವಿಯಲ್ಲಿ ಪ್ರಮುಖವಾಗಿ ಮೂಲ ವಿಜ್ಞಾನದ ಉಳಿವಿನ ಆರಂಭವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಂದ ಆಗಬೇಕಿದೆ ಅದಕ್ಕಾಗಿ ಈ ಹಂತದಲ್ಲಿ ಓದುವ ಮಕ್ಕಳಿಗೆ ವಿಜ್ಞಾನದ ಬಗೆಗೆ ಆಸಕ್ತಿ ಮೂಡಿಸುವು ದು ಬಹಳ ಮುಖ್ಯ.ಹಾಗಾಗಿ ಇದಕ್ಕೆ ಪೂರಕವಾಗಿ ಪ್ರಶ್ನೆ ಪತ್ರಿಕೆಯ ಸ್ವರೂಪ ಬದಲಾವಣೆ ಪ್ರಮುಖ ಹೆಜ್ಜೆಯಾಗಿದೆ ಎಂಬ ಮನವಿಯನ್ನು ಸಲ್ಲಿಸಲಾಯಿತು.
ಈ ವೇಳೆ ವೇದಿಕೆಯ ಅಧ್ಯಕ್ಷರಾದ ರವೀಂದ್ರ ಬಿ., ಕಾರ್ಯದರ್ಶಿಗಳಾದ ಮಹೇಶ್ವರಪ್ಪ ಎಂ.ಎಸ್. ಖಜಾಂಚಿ ಗಳಾದ ರೇಣುಕರಾಜ್.ಜಿ.ಹೆಚ್ ಹಾಗೂ ಪಾವಗಡ ತಾಲ್ಲೂಕಿನ ಸರ್ಕಾರಿ , ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q