ಪಾವಗಡ: ತಾಲೂಕಿನ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಲುವಾಗಿ ಇಂದು ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಬಾರಿಯ ಪರೀಕ್ಷೆಯಲ್ಲಿ ಶಾಲೆಯ ರಿಷಿತಾ ಎಸ್. 613 ಅಂಕಗಳನ್ನು ಪಡೆಯುವ ಮೂಲಕ ಪಾವಗಡ ತಾಲೂಕಿಗೆ ತೃತೀಯ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಪ್ರೀತಮ್ ಎ. 606 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚಂದು ಆರ್.ಎಸ್. ಮತ್ತು ಸುಪ್ರೀತ್ ರೆಡ್ಡಿ ತಲಾ 605 ಅಂಕಗಳನ್ನು ಗಳಿಸಿ ಶಾಲೆಗೆ ಜಂಟಿಯಾಗಿ ತೃತೀಯ ಸ್ಥಾನ ತಂದುಕೊಟ್ಟಿದ್ದಾರೆ.
ಶಾಲೆಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಅವರ ಪೋಷಕರ ಸಮ್ಮುಖದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಶಾಲೆಯ ಆಡಳಿತಾಧಿಕಾರಿಗಳಾದ ಶ್ರೀನಿವಾಸ್ ಅವರು ವಿದ್ಯಾರ್ಥಿಗಳ ಶ್ರಮವನ್ನು ಶ್ಲಾಘಿಸಿ, ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ನರಸಿಂಹಪ್ಪ ಎಸ್., ಶಿಕ್ಷಕಿಯರಾದ ಮಮತಾ, ಶ್ವೇತ, ಲೀಲಾವತಿ, ಶ್ರೀದೇವಿ ಹಾಗೂ ವಿದ್ಯಾರ್ಥಿಗಳ ಪೋಷಕರು ಮತ್ತು ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


