ಕೊಡಗು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಓಂಕಾರಾಪ್ಪ ಕೊಲೆ ಆರೋಪಿಯಾಗಿದ್ದರೆ, ಮೀನಾ ಮೃತ ವಿದ್ಯಾರ್ಥಿನಿಯಾಗಿದ್ದಾರೆ.
ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್ ಮಾಡಲಾಗಿತ್ತು. ಬಾಲ್ಯವಿವಾಹದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ. ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296