ಮಂಡ್ಯ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿಖಿಲ್(16) ನೇಣಿಗೆ ಶರಣಾದ ವಿದ್ಯಾರ್ಥಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 3 ವಿಷಯದಲ್ಲಿ ಫೇಲ್ ಆಗಿದ್ದರು. ಇದರಿಂದ ಮನನೊಂದು ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296