ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದು, ಎರಡೂ ಸಮುದಾಯಗಳ ಬಹುವರ್ಷಗಳ ಮೀಸಲಾತಿ ಬೇಡಿಕೆಯು ಈಡೇರಿದಂತಾಗಿದೆ.
ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳು ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕುರಿತು ಜನವರಿ 12ರಂದು ವಿಶೇಷ ರಾಜ್ಯಪತ್ರ ಹೊರಡಿಸಿದ್ದಾರೆ.
ಎಸ್ಸಿ ಸಮುದಾಯಕ್ಕೆ ಈ ಹಿಂದೆ ಇದ್ದ ಶೇ. 15 ಮೀಸಲಾತಿಯನ್ನು ಶೇ. 17 ಕ್ಕೆ ಹಾಗೂ ಎಸ್ಟಿ ಸಮುದಾಯಕ್ಕೆ ಈ ಹಿಂದೆ ಇದ್ದ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ ಶೇ.7ಕ್ಕೆ ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿದ್ದ ಸರ್ಕಾರ, ಈ ಹಿಂದೆಯೇ ಸುಗ್ರೀವಾಜ್ಞೆ ಹೊರಡಿಸಿತ್ತು. ಈಗ ವಿಧೇಯಕಕ್ಕೆ ರಾಜ್ಯಪಾಲರ ಮುದ್ರೆಯೂ ಬಿದ್ದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


