ಗ್ರಾಮ ಪಂಚಾಯತಿ ಸಿಬ್ಬಂದಿಯ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರದಲ್ಲಿ ನಡೆದಿದೆ. ಪಂಚಾಯಿತಿ ಕಾರ್ಯಾಲಯದಲ್ಲಿಯೇ ಕಿಸ್ ಮಾಡುತ್ತಾ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಈಗ ಈ ಫೋಟೋಗಳು ವೈರಲ್ ಆಗಿದ್ದು, ಮಹಿಳೆಯಿಂದ ಲೈಂಗಿಕ ಕಿರುಕುಳದ ಕೇಸ್ ದಾಖಲಾಗಿದೆ.
ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ, ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ ಒಡ್ಡಿದ್ದಾರೆಂದು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ.
ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮೊದಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಕಾಮದಾಟವಾಡಿದ್ದಾನೆ. ಅದನ್ನು ವಿರೋಧ ಮಾಡಿದ್ದಕ್ಕೆ ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜೊತೆಗೆ, ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ ಎನ್ನಲಾಗಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ರಾಮಸಾಗರ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಮಹಿಳಾ ಉದ್ಯೋಗಿ ಜೊತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಫೋಟೋಗಳು ಸಾಮಾಜಿಕ ಜಾಲ ತಾಣಗಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಮಹಿಳಾ ಸಿಬ್ಬಂದಿ ನನ್ನ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ ಎಂದು ದೂರು ನೀಡಿದ್ದಾರೆ. ಮತ್ತೊಂದೆಡೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣಗೆ ಎಚ್ಚರಿಕೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA