ಬೀದರ್: ಎಟಿಎಂ ದರೋಡೆ ಪ್ರಕರಣದಲ್ಲಿ ಇಬ್ಬರು ದರೋಡೆಕೋರರು ಗುಂಡು ಹಾರಿಸಿದ ಪರಿಣಾಮ ಗಿರಿ ವೆಂಕಟೇಶ ಎಂಬವರು ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಗುಂಡಿನ ದಾಳಿಗೊಳಗಾಗಿದ್ದ ಮತ್ತೊಬ್ಬ ಸಿಬ್ಬಂದಿ ಶಿವ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸದ್ಯ ಇವರಿಗೆ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಹೈದ್ರಾಬಾದಿನ ಕೇರ್ ಆಸ್ಪತ್ರೆಯಲ್ಲಿ 4 ಗಂಟೆ ಶಸ್ತ್ರ ಚಿಕಿತ್ಸೆ ನಡೆಸಿದ ಬಳಿಕ ಶಿವ ಅಪಾಯದಿಂದ ಪಾರಾಗಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಈವರೆಗೆ ಒಟ್ಟು 11 ಲಕ್ಷ ರೂಪಾಯಿ ವೆಚ್ಚವಾಗಿದೆ. ಈ ಪೈಕಿ 9 ಲಕ್ಷ ರೂ. ನೀಡಲಾಗಿದೆ ಎಂದು ಬೀದರ್ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳಿದ ಬಾಕಿ ವೆಚ್ಚ 2 ಲಕ್ಷ ರೂ.ಗಳನ್ನು ಸಿ.ಎಮ್.ಎಸ್. ಕಂಪನಿ ವತಿಯಿಂದ ಪಾವತಿಸಲಾಗುವುದಾಗಿ ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4