ಹೈದರಾಬಾದ್: ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು, ಮಹಿಳೆಯ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹೈದರಾಬಾದ್ ನ ಕ್ರಾಸೋಡ್ಸ್ ನ ಸಂಧ್ಯಾ ಥಿಯೇಟರ್ ನಲ್ಲಿ ಈ ದುರಂತ ಸಂಭವಿಸಿದೆ. ದಿಲ್ಸುಖ್ ನಗರದ ರೇವತಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರ ಪತಿ ಭಾಸ್ಕರ್ ಹಾಗೂ ಇಬ್ಬರು ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಥಿಯೇಟರ್ ಒಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಮಹಿಳೆ ಮತ್ತು ಅವರ ಮಗ ಭಾರಿ ಜನಸಂದಣಿಯಿಂದ ನೂಕಲ್ಪಟ್ಟಿದ್ದು, ನಂತರ ಉಸಿರುಗಟ್ಟಿ ಪ್ರಜ್ಞೆ ಕಳೆದುಕೊಂಡಿರುವುದಾಗಿ ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪೊಲೀಸರು ತಿಳಿಸಿದ್ದಾರೆ.
ಜನರ ಗುಂಪನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿತ್ರಮಂದಿರದಲ್ಲಿ ಜಮಾಯಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx