ಬೀದರ್: ಕಾರ್ಮಿಕರು, ಬಡವರು ಹಾಗೂ ರೋಗಿಗಳ ಅನುಕೂಲಕ್ಕಾಗಿ ನಗರದ ನೌಬಾದ್ ನ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹೊಸ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕು ಎಂದು ನಗರಸಭೆ ಸದಸ್ಯ ಸೂರ್ಯಕಾಂತ ಸಾಧುರೆ ಆಗ್ರಹಿಸಿದ್ದಾರೆ.
ನೌಬಾದ್, ಪ್ರತಾಪನಗರ, ಲುಂಬಿಣಿ ನಗರ, ಆಟೋನಗರ, ಜೈಭೀಮ ನಗರ, ಯಲ್ಲಾಲಿಂಗ ಕಾಲೋನಿ, ಮಾಧವನಗರ, ವಿವೇಕಾನಂದ ಕಾಲೊನಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಕಾರ್ಮಿಕರು ಇದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಡ ರೋಗಿಗಳು ಹಾಗೂ ಸಂಬಂಧಿಕರು ಬರುತ್ತಾರೆ. ಆದರೆ, ಉಪಾಹಾರ ಹಾಗೂ ಊಟಕ್ಕಾಗಿ ಪರದಾಡುವ ಸ್ಥಿತಿ ಇದೆ ಎಂದು ಪೌರಾಡಳಿತ ಸಚಿವ ರಹೀಂಖಾನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4