ನವದೆಹಲಿ: ಫೆಬ್ರವರಿಯಿಂದ ಬ್ಯಾಂಕ್ ಆಫ್ ಬರೋಡಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿವಿಧ ಸೇವೆಗಳಿಗೆ ಹೊಸ ನಿಯಮಗಳನ್ನು ಜಾರಿಗೆ ತರಲಿವೆ. ಇದು ದೇಶದ ಜನರ ಜೇಬಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
SBI ನಿಂದ ದೊಡ್ಡ ಬದಲಾವಣೆಯಾಗುವ ಸಾಧ್ಯತೆಗಳಿವೆ. ಇದು ಹಣ ವರ್ಗಾವಣೆಯ ನಿಯಮಗಳನ್ನು ಬದಲಾಯಿಸುತ್ತಿದೆ. IMPS ಮೂಲಕ 2 ಲಕ್ಷದಿಂದ 5 ಲಕ್ಷದವರೆಗೆ ಹಣವನ್ನು ವರ್ಗಾಯಿಸಲು ಬ್ಯಾಂಕ್ ಈಗ 20ರೂ ಜೊತೆಗೆ GST ಶುಲ್ಕವನ್ನು ವಿಧಿಸುತ್ತದೆ. ಇದು ಜನರ ಆರ್ಥಿಕತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಇನ್ನೂ ಬ್ಯಾಂಕ್ ಆಫ್ ಬರೋಡಾ ನಿಯಮಗಳು ಫೆಬ್ರವರಿ 1 ರಿಂದ ಬದಲಾಗಲಿದ್ದು ಬ್ಯಾಂಕ್ ಆಫ್ ಬರೋಡಾ ಗ್ರಾಹಕರು ಫೆಬ್ರವರಿ 1 ರಿಂದ ಚೆಕ್ ಪಾವತಿಗೆ ಧನಾತ್ಮಕ ಪಾವತಿ ವ್ಯವಸ್ಥೆಯನ್ನು ಅನುಸರಿಸಬೇಕಾಗುತ್ತದೆ. ಅಂದರೆ ಚೆಕ್‌ಗೆ ಸಂಬಂಧಿಸಿದ ಮಾಹಿತಿಯನ್ನು ಕಳುಹಿಸಬೇಕಾಗುತ್ತದೆ, ಆಗ ಮಾತ್ರ ನಿಮ್ಮ ಚೆಕ್ ಕ್ಲಿಯರ್ ಆಗುತ್ತದೆ ಎನ್ನಲಾಗುತ್ತಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಬದಲಾಗುತ್ತಿರುವ ನಿಯಮಗಳು ಜನರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ವಾಸ್ತವವಾಗಿ, ನಿಮ್ಮ ಖಾತೆಯಲ್ಲಿ ಹಣದ ಕೊರತೆಯಿಂದಾಗಿ ಕಂತು ಅಥವಾ ಹೂಡಿಕೆ ವಿಫಲವಾದರೆ, ನೀವು 250 ರೂ ದಂಡವನ್ನು ಪಾವತಿಸಬೇಕಾಗುತ್ತದೆ. ಇಲ್ಲಿಯವರೆಗೆ ಈ ದಂಡ 100 ರೂ ವಿಧಿಸಬೇಕಿತ್ತು. ಆದರೆ ಈಗ ನೀವು ಇದಕ್ಕಾಗಿ ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಲಾಗಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB