ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ 42,018 ಕೋಟಿ ರೂ.ಗಳ ಅನುದಾನವನ್ನು ಎಸ್ ಸಿಪಿ/ಟಿಎಸ್ ಪಿ ಅಡಿ ಒದಗಿಸಲಾಗಿದೆ.
ಪರಿಶಿಷ್ಟ ಜಾತಿಯ ಉಪಯೋಜನೆಯಡಿ 29,992 ಕೋಟಿ ರೂ., ಬುಡಕಟ್ಟು ಉಪಯೋಜನೆಯಡಿ 12,026 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಸೌಲಭ್ಯಕ್ಕೆ ಪ್ರಗತಿ ಕಾಲೋನಿ ಯೋಜನೆಯಡಿ 559 ಕೋಟಿ ರೂ. ಹಿಂದಿನ ವರ್ಷದ ಕಾಮಗಾರಿ ಪೂರ್ಣಗೊಳಿಸಲು 222 ಕೋಟಿ ರೂ. ಒದಗಿಸಲಾಗಿದೆ. ದಲಿತರ ಮೇಲಿನ ದೌರ್ಜನ್ಯ ತಡೆಗಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಹೊಸ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ.
ಎಸ್ ಸಿ/ಎಸ್ ಟಿ, ಓಬಿಸಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ವಸತಿ ಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ.
26 ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 1292 ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ಜಾತಿಯ 40, ಪರಿಶಿಷ್ಟ ಪಂಗಡದ 7, ಹಿಂದುಳಿದ ವರ್ಗಗಳ 14 ವಸತಿ ಶಾಲೆಗಳೂ ಸೇರಿದಂತೆ ನಿವೇಶನ ಲಭ್ಯವಿರುವ 61 ಕಡೆ ಕ್ರೈಸ್ ವಸತಿ ಶಾಲೆಗಳಿಗೆ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4