ಬೆಂಗಳೂರು: 2025–26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 16ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಬರೆದಿದ್ದಾರೆ.
ಮುಖ್ಯಾಂಶಗಳು:
ರಾಜ್ಯ ಬಜೆಟ್ ನಲ್ಲಿ ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು.
ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ.
ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ ಗೆ ವ್ಯವಸ್ಥೆ ಕಲ್ಪಿಸಲಾಗುವುದು.
ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು, ಭೂವರಾಹ ಯೋಜನೆಯಡಿ ಸ್ಥಿರಾಸ್ತಿ ದಾಖಲೀಕರಣಗೊಳಿಸಲು ಕ್ರಮವಹಿಸಲಾಗುವುದು.
ಪ್ರವಾಸೋದ್ಯೋಮ ತಾಣವಾಗಿ ಚಂದ್ರಗುತ್ತಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4