ಬೆಂಗಳೂರು: 2024ನೇ ಲೋಕಸಭೆ ಚುನಾವಣೆ ನೀತಿ ಸಂಹಿತೆ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ ನ್ನು ಫೆಬ್ರವರಿಯಲ್ಲಿ ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಜನತೆಗೆ ಮಧ್ಯಂತರ ಬರ ಪರಿಹಾರವಾಗಿ ಪ್ರತಿ ಹೆಕ್ಟೇರ್ ಗೆ 2,000 ರೂಪಾಯಿಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ವರ್ಗಾಯಿಸಲು ಪ್ರಾರಂಭಿಸಿದೆ ಎಂದು ಹೇಳಿದರು. ರಾಜ್ಯವು ಕೇಂದ್ರ ಸರ್ಕಾರದಿಂದ ನೆರವು ಪಡೆದ ನಂತರ, ಎನ್ ಡಿಆರ್ ಎಫ್ ಮಾನದಂಡಗಳ ಪ್ರಕಾರ ಸಂತ್ರಸ್ತ ರೈತರಿಗೆ ಪರಿಹಾರವನ್ನು ನೀಡಲಾಗುವುದು ಎಂದು ಇದೇ ವೇಳೆ ಸಿದ್ದರಾಮಯ್ಯ ತಿಳಿಸಿದರು.
ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ಯಾವುದೇ ಧರ್ಮದವರಾಗಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದರು


