ಬೆಂಗಳೂರು: 2025–26ನೇ ಸಾಲಿನ ಬಜೆಟ್ ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025–26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4