ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ, ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ರಾಜಕೀಯ ನಿರ್ಧಾರ ತೆಗೆದುಕೊಂಡಿದೆ. ನಮ್ಮ ನೀರು ನಮ್ಮ ಹಕ್ಕು. ಅವರು ಅವರದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ. ಈ ಹಿಂದೆ ಅನೇಕ ಬಾರಿ ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಹೋಗಿ ಮಾತುಕತೆ ಮಾಡಲಾಗಿತ್ತು. ನಾವು ಈ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ನ್ಯಾಯಾಲಯದ ತೀರ್ಪಿಗೆ ಯಾರೂ ಅಡ್ಡಿ ಮಾಡಲು ಸಾಧ್ಯವಿಲ್ಲ. ಅವರು ತಮ್ಮ ವಾದ ಮಾಡಲಿ, ನಾವು ನಮ್ಮ ವಾದ ಮಂಡಿಸುತ್ತೇವೆ, ಯಾರೂ ನ್ಯಾಯಾಲಯಗಳಿಗಿಂತ ಮೇಲಲ್ಲ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4