ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ನಮ್ಮ ಮೆಟ್ರೋ ದರ ಏರಿಕೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದು, 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್ ಬಿಲ್, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ ಎಂದರು.
ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು BMRCL ಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದು, ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4