ಬೆಂಗಳೂರು: ಈ ಸರಕಾರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಹಾಲಿನ ದರ ಏರಿಸುವ ವಿಷಯ ಕ್ಯಾಬಿನೆಟ್ ಮುಂದಿದೆ. ಹಾಲಿನ ದರ ಸಬ್ಸಿಡಿ ರೈತರಿಗೆ ಕೊಡಿ; ಆದರೆ ಜನರ ಮೇಲೆ ಯಾಕೆ ಹೊರೆ ಹಾಕುತ್ತೀರಿ? ನಿಮಗೆ ಯೋಗ್ಯತೆ ಇಲ್ಲದಿದ್ದರೆ ಬಿಟ್ಟು ಹೋಗಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ಯಾರಂಟಿಗಳನ್ನು ಘೋಷಿಸಿದ್ದೀರಿ; ಎಲ್ಲದರ ಬೆಲೆಗಳನ್ನೂ ಹೆಚ್ಚಿಸಿದ್ದೀರಿ. ಕಾನೂನು, ಸಂವಿಧಾನದಲ್ಲಿ ಇಲ್ಲದ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಮಸೂದೆ ಮಂಜೂರು ಮಾಡಿಕೊಂಡಿದ್ದೀರಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ದಲಿತರನ್ನು ನಿರಂತರ ವಂಚಿಸುತ್ತ ಬಂದ ಸರಕಾರ, ಇದೀಗ ಅಲ್ಪಸಂಖ್ಯಾತರನ್ನೂ ವಂಚಿಸಲು ಮುಂದಾಗಿದೆ. ದಲಿತರಿಗೆ ಮೀಸಲಿಟ್ಟ 39 ಸಾವಿರ ಕೋಟಿ ಆ ಜನಾಂಗಗಳಿಗೆ ತಲುಪದಂತೆ ಮಾಡಿದ್ದೀರಿ. ಈಗ ಅಲ್ಪಸಂಖ್ಯಾತರನ್ನೂ ವಂಚಿಸಲು ಹೊರಟಿದ್ದೀರಿ ಎಂದು ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4