ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆಯ ರೇಷ್ಮೆ, ಹತ್ತಿ ಮತ್ತು ಉಣ್ಣೆ ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕೃಷ್ಟತೆಯ ಉತ್ಪನ್ನ ತಯಾರಿಸಿದ ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆಯ ಅಸಾಧಾರಣ ಕೌಶಲ್ಯದಲ್ಲಿ 10 ವರ್ಷಗಳ ಅನುಭವ ಹೊಂದಿರುವ ಕನಿಷ್ಠ 30 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಸೀರೆ ಉತ್ಪನ್ನದ ಮಾದರಿ, ಬಣ್ಣದ ಛಾಯಾಚಿತ್ರ, ವಿವಿಧ ಹಂತದ ವಿಡಿಯೋದೊಂದಿಗೆ ಅರ್ಜಿಯನ್ನು ಮೇ 30ರೊಳಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ — 0816-2275370, ಮೊ.ಸಂ. 7022193202ನ್ನು ಸಂಪರ್ಕಿಸಬೇಕೆಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


