ತುಮಕೂರು: ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯು ಪುಸ್ತಕ ಆಯ್ಕೆಗಾಗಿ 2024ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಮುದ್ರಣವಾಗಿ ಪ್ರಕಟಗೊಂಡ ಯಾವುದೇ ಭಾಷೆಯ ಪುಸ್ತಕಗಳನ್ನು ಆಹ್ವಾನಿಸಿದೆ.
ಆಸಕ್ತ ಲೇಖಕರು, ಲೇಖಕ ಪ್ರಕಾಶಕರು, ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಪುಸ್ತಕಗಳನ್ನು ಸಲ್ಲಿಸಬಹುದು. ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇವರಿಗೆ 2025ರ ಜನವರಿ 2ರೊಳಗಾಗಿ ಸಲ್ಲಿಸಬಹುದಾಗಿದೆ.
ಆಯ್ಕೆಗಾಗಿ ಸಲ್ಲಿಸುವ ಪುಸ್ತಕವನ್ನು 2025ರ ಜನವರಿ 1ರೊಳಗಾಗಿ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ನೋಂದಣಿ ಮಾಡಿಸಬೇಕು. ಪುಸ್ತಕ ನೋಂದಣಿಗಾಗಿ ಅಂತರ್ಜಾಲ www.dpl.karnataka.gov.in ಅಥವಾ ದೂರವಾಣಿ ಸಂಖ್ಯೆ 080–22864990/ 22867358ನ್ನು ಸಂಪರ್ಕಿಸಬಹುದಾಗಿದೆ ಎಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q