ಮಡಿಕೇರಿ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಪೊನ್ನಂಪೇಟೆ ತಾಲ್ಲೂಕು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪದವಿ ಪೂರ್ವ ಕಾಲೇಜು ಹಾಗೂ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಪದವಿ ಪುರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ಮತ್ತು ಬಾಲಕಿಯರ ಹಾಕಿ ಪಂದ್ಯಾವಳಿ 2024-25 ಯು ಡಿಸೆಂಬರ್, 02 ಮತ್ತು 03 ರಂದು ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿಯು ಕಾಲೇಜು ಇಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಷ್ಟ್ರೀಯ ಹಾಕಿ ಕ್ರೀಡಾಪಟು ಪುಲಿಯಂಡ ತಿಮ್ಮಣ್ಣ, ಪೊನ್ನಂಪೇಟೆ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಡಾ.ಎಂ.ಸಿ.ಕಾರ್ಯಪ್ಪ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪೊನ್ನಂಪೇಟೆ ಕೊಡವ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿ ಸಿ.ಪಿ.ರಾಕೇಶ್ ಪೂವಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.
ಡಿಸೆಂಬರ್, 03 ರಂದು ಸಂಜೆ 4 ಗಂಟೆಗೆ ಪೊನ್ನಂಪೇಟೆ ಟರ್ಪ್ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪ ನಿರ್ದೇಶಕರಾದ ಮಂಜುಳ ಕೆ. ಇತರರು ಪಾಲ್ಗೊಳ್ಳಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx