ತುಮಕೂರು : ಇದೇ ತಿಂಗಳು 26 ರಂದು ನಡೆಯಲಿರುವ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾಸಮಾರಂಭ ಹಾಗೂ ಚಟುವಟಿಕೆಗಳ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಡಾ.ಬಾಲ ಗುರುಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಇದೇ ಸಂರದರ್ಭಲ್ಲಿ ಮಾತನಾಡಿದ ಅವರು, ಇದೇ ತಿಂಗಳ 26 ರಂದು ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಜಿಲ್ಲೆಯ ಮತ್ತೊಬ್ಬ ಸಚಿವರಾದ ಕೆ.ಎನ್.ರಾಜಣ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ರಾಜ್ಯ ಚಲನಚಿತ್ರ ನಟಿ ಉಮಾಶ್ರೀ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ರೂಪಾ ಸಿಂಧೂರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸಿ.ಇ.ಒ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್, ಇತರರು ಆಗಮಿಸಲಿದ್ದು, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ಹರಿಕಥಾ ದಾಸರಾದ ಲಕ್ಷ್ಮಣ ದಾಸ್, ಚಲನಚಿತ್ರ ನಟ ಹನುಮಂತೇಗೌಡ, ಸಪ್ತಗಿರಿ ಕಾಲೇಜಿನ ಅಧ್ಯಕ್ಷರಾದ ಜಿ.ವಿ.ಕುಮಾರ್, ಇವರುಗಳನ್ನು ಸನ್ಮಾನ ಕಾರ್ಯಕ್ರಮ ಜರುಗಲಿದೆ.
ಜಿಲ್ಲಾ ಪ್ರಾಂಶುಪಾಲ ಸಂಘದ ಅಧ್ಯಕ್ಷ ಪ್ರಭಾಕರ್ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ಅದ್ದೂರಿಯಾಗಿ ನಡೆದಿದ್ದು, ಅದರಂತೆ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಎಲ್ಲಾ ಪ್ರಾಂಶುಪಾಲರು, ಉಪನ್ಯಾಸಕರ ಸಹಕಾರದಿಂದ ಸುಸಜ್ಜಿತವಾಗಿ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.
ಪ್ರಾಂಶುಪಾಲ ಸಂಘದ ಕಾರ್ಯದರ್ಶಿ ಆರಾಧ್ಯ, ಜಿ.ಕೃಷ್ಣಮೂರ್ತಿ, ನೇರಂ ನಾಗರಾಜು, ರಾಜ್ ಕುಮಾರ್, ಜಿಲ್ಲಾ ಅನುದಾನಿತ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿ ಪರಮೇಶ್ವರ್, ಕೆ.ಕೆ.ನಾಗರಾಜು, ಪ್ರಾಂಶುಪಾಲರಾದ ಅಕ್ಕಮ್ಮ, ಬಸವರಾಜು, ಶಿವಕುಮಾರ್, ಚಂದ್ರಣ್ಣ, ಸತೀಶ್, ರಾಮಚಂದ್ರಯ್ಯ ಹಾಗೂ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಸಭೆಯಲ್ಲಿ ಪಾಲ್ಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx