ಬೆಂಗಳೂರು: ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಸೋತಿರುವುದಕ್ಕೆ ಕೇವಲ ರಾಜ್ಯಾಧ್ಯಕ್ಷರೊಬ್ಬರೇ ಹೊಣೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆಗೆ ಈ ಸಂಬಂಧ ಮಾತನಾಡಿದ ಅವರು, ಈ ಸೋಲಿಗೆ ಪಕ್ಷವೇ ಜವಾಬ್ದಾರಿ ಹೊರಲಿದೆ. ಪಕ್ಷವು ಇದನ್ನು ಸವಾಲಾಗಿ ತೆಗೆದುಕೊಳ್ಳಲಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಬೂತ್ ಮಟ್ಟದಿಂದ ಸಂಘಟಿಸಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದೇವೆ ಎಂದು ವಿಶ್ವಾಸವನ್ನ ವ್ಯಕ್ತಪಡಿಸಿದರು.
ಕಾಂಗ್ರೆಸ್ಸಿಗರು ವಾಮ ಮಾರ್ಗದ ಮೂಲಕ, ವಕ್ರ ಮಾರ್ಗದ ಮೂಲಕ, ಹಣವನ್ನು ಹರಿಸುವ ಮೂಲಕ, ಜಾತಿ ವಿಷಬೀಜವನ್ನು ಬಿತ್ತಿ, ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ಒಗ್ಗಟ್ಟು ಮಾಡಿ, ಮುಖ್ಯಮಂತ್ರಿಗಳು ತಾನು ಸಿಎಂ ಆಗಿ ಐದು ವರ್ಷ ಇರಬೇಕೋ ಬೇಡವೋ ಎಂದು ಮಂತ್ರಿಗಳಿಗೆ, ಶಾಸಕರಿಗೆ ಕೇಳಿ, ಭಯವನ್ನುಂಟು ಮಾಡಿ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿ ಗೆದ್ದಿದ್ದಾರೆ. ಎನ್ಡಿಎ 3 ಸೀಟುಗಳನ್ನು ಸೋತಿದೆ. ಸೋಲಿನ ಅವಲೋಕನ ಮಾಡಿ ಬಿಜೆಪಿಯನ್ನು ಒಂದು ಬಲಿಷ್ಠ ಸಂಘಟನೆಯನ್ನಾಗಿ ರೂಪಿಸಿ ನಾವು ಮುಂದೆ ಅಧಿಕಾರಕ್ಕೆ ಬರುತ್ತೇವೆ ಎಂದು ರವಿ ಕುಮಾರ್ ತಿಳಿಸಿದರು.
ಶಿಗ್ಗಾಂವಿಯಲ್ಲಿ ಅಲ್ಪಸಂಖ್ಯಾತರ ಮತಗಳೂ ಬಹಳ ದೊಡ್ಡ ಪ್ರಮಾಣದಲ್ಲಿ ಇದೆ. ನಮಗೆ ಬರುವ ಮತಗಳು ಸ್ವಲ್ಪ ಮಟ್ಟಿಗೆ ವಿಭಜನೆಯಾಗಿವೆ. ಅದರಲ್ಲಿ ಹಣವನ್ನು ಹರಿಸಿದ್ದಾರೆ, ವಾಮಮಾರ್ಗವಾಗಿ ಕೆಲಸ ಮಾಡಿದ್ದಾರೆ ಸಚಿವರು ಬೀಡು ಬಿಟ್ಟಿದ್ದಾರೆ; ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಶಾಸಕರನ್ನು ನೇಮಿಸಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296