ಔರಾದ್: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಬೀದರ್ ಜಿಲ್ಲೆಯ ಔರಾದ ಪಟ್ಟಣದ ಅಲೆಮಾರಿ ಬುಡಕಟ್ಟು ಜನಾಂಗದ ಕಾಲೋನಿಗೆ ಭೇಟಿ ನೀಡಿದರು.
ಜನರ ಕುಂದುಕೊರತೆ ಆಲಿಸಿದ ಅವರು, ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗೈರಾಗಿರುವುದನ್ನು ಕಂಡು, ಅಧಿಕಾರಿಗಳ ವಿರುದ್ಧ ಗರಂ ಆದರು.
“ಅಲೆಮಾರಿ ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಸೈಟ್ ಮತ್ತು ಮನೆ ನೀಡಲಿಕ್ಕೆ ಇನ್ನೆಷ್ಟು ದಿನಗಳು ಬೇಕು?” ಅಂತಾ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4