ತುಮಕೂರು: ಅಶ್ವಿನಿ ಪುನೀತ್ ರಾಜಕುಮಾರ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುನೀತ್ ರಾಜಕುಮಾರ್ ಅಭಿಮಾನಿಗಳು ಇಂದು ಗೃಹ ಸಚಿವ ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸಚಿವ ಪರಮೇಶ್ವರ್ ಅವರಿಗೆ ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿಗಳು ಮನವಿ ಪತ್ರ ಸಲ್ಲಿಸಿದ್ದರು.
ಕೂಡಲೇ ಅವರ ಮನವಿಗೆ ಸ್ಪಂದಿಸಿದ ಸಚಿವ ಪರಮೇಶ್ವರ್ ಈ ಕುರಿತಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು. ಕೃತ್ಯವೆಸಗಿದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆನೀಡಲಾಗುವುದು ಎಂದು ಸಚಿವ ಪರಮೇಶ್ವರ್ ಭರವಸೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296