ತುಮಕೂರು: ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ವ್ಯಸನಗಳಿಂದ ಮುಕ್ತರಾಗಿ ವಿದ್ಯಾರ್ಥಿಗಳು ಮೊಬೈಲ್ ಗಳಿಂದ ದೂರವಿದ್ದು, ಭವಿಷ್ಯ ಉಜ್ವಲವಾಗಿಸಿಕೊಳ್ಳಿ, ಮಾದಕ ಪಾನೀಯ, ಮಾದಕ ವಸ್ತುಗಳಿಂದ ದೂರವಿದ್ದು, ಶಿಸ್ತುಬದ್ಧವಾಗಿ ಬದುಕಿ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಪುರುಷೋತ್ತಮ್ ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ನಡೆಮುಕ್ತ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವ್ಯಸನಗಳಿಂದ ದೂರವಿದ್ದು, ಕನಸುಗಳನ್ನು ಕಾಣುವ ಮೂಲಕ ಜೀವನವನ್ನು ಅರ್ಥಪೂರ್ಣವಾಗಿ ರೂಪಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಿ ಎಂದು ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಚಾರ್ಯರಾದ ಎಸ್.ರಾಜ್ ಕುಮಾರ್ ಮಾತನಾಡಿ, ಸದೃಢ ದೇಹದಿಂದ ಸದೃಢ ಮನಸ್ಸು ಸಾಧ್ಯ. ಆರೋಗ್ಯವಂತ ಒಳ್ಳೆಯ ವಿದ್ಯಾರ್ಥಿಗಳಿಂದ ಒಳ್ಳೆಯ ಸಮಾಜ ನಿರ್ಮಾಣ ಸಾಧ್ಯ. ವ್ಯಸನಗಳಿಂದ ಮುಕ್ತರಾಗಿ ಬದುಕು ಕಟ್ಟಿಕೊಳ್ಳಿ ಎಂದರು.
ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ರೆಹಮತ್ ಉಲ್ಲಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ನಯನ ಮತ್ತು ಚಂದ್ರಕಲಾ ಪ್ರಾ ರ್ಥಿಸಿದರು. ಉಪನ್ಯಾಸಕರಾದ ವಸಂತ್ ಕುಮಾರ್ ವಂದಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


