ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಸ್ಪಂದಿಸಬೇಕಾದ ಕೇಂದ್ರ ಸರ್ಕಾರ ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ. ಹೆಚ್ ಮುನಿಯಪ್ಪ ಗುಡುಗಿದ್ದಾರೆ.
ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಸಚಿವ ಕೆ. ಹೆಚ್. ಮುನಿಯಪ್ಪ, ನಾವು ಕೇಂದ್ರ ಸರ್ಕಾರದ ಮುಂದೆ ಪರಿಪರಿಯಾಗಿ ಬೇಡಿಕೊಂಡಿದ್ದೇವೆ. ಆಹಾರ ಭದ್ರತಾ ಕಾಯಿದೆ ಹೇಗೆ ಕಾರ್ಯನಿರ್ವಹಣೆ ಮಾಡುತ್ತದೆ? ಎಂಬುದು ನಮಗೂ ಗೊತ್ತಿದೆ. ಅವರ ಬಳಿ ಅಕ್ಕಿ ಇದೆ. ನಾವು ಪುಕ್ಕಟ್ಟೆ ಅಕ್ಕಿ ಕೇಳುತ್ತಿಲ್ಲ. ಅದಕ್ಕೆ ಹಣ ನೀಡುತ್ತೇವೆ ಎಂದರೂ, ಕೇಂದ್ರ ಸರ್ಕಾರ ಅಕ್ಕಿ ನೀಡಲಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಪಾಲಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


