nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಲಿನಲ್ಲಿ ಅರಳಿದ ಲಕ್ಕುಂಡಿ ಶಿಲ್ಪಕಲೆ: ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ
    ತುಮಕೂರು January 27, 2025

    ಕಲ್ಲಿನಲ್ಲಿ ಅರಳಿದ ಲಕ್ಕುಂಡಿ ಶಿಲ್ಪಕಲೆ: ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ

    By adminJanuary 27, 2025No Comments2 Mins Read
    lakkundi

    ವಿಶೇಷ ವರದಿ/ ತುಮಕೂರು: ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26ರ ಭಾನುವಾರ ನಡೆದ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪಥ ಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು.

    ರಾಜಧಾನಿಯ ಕರ್ತವ್ಯ ಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು.


    Provided by
    Provided by

    ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು.

    ನಿಗಧಿತ ರೂಪು–ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದ್ದು ವಿಶೇಷ ಎನಿಸಿದೆ.

    ಅಹಿಂಸಾವಾದಿಯ ನೆಲೆಬೀಡು, ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿ ಬಂದಿದ್ದು, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತಪಡಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

    ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರ ಉಸ್ತುವಾರಿಯಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಕಲಾ ನಿರ್ದೇಶಕ ಶಶಿಧರ ಅಡಪ ಕಲಾ ನಿರ್ದೇಶನ ಮಾಡಿದ್ದರು.

    ಸಂಗೀತ ನಿರ್ದೇಶಕ ಪ್ರವೀಣ್ ಡಿ.ರಾವ್ ಅವರು ಕನ್ನಡ ಸಾಹಿತ್ಯ ಇರುವ ಸುಮಧುರವಾದ ಸಂಗೀತ ಕರ್ತವ್ಯ ಪಥದಲ್ಲಿ ನಿನಾದಿಸಿ ಕೇಳುಗರ ಮನಸೂರೆಗೊಂಡಿತು. ಮೈಸೂರು, ಬೆಂಗಳೂರು, ಗದಗ ಮತ್ತು ಧಾರವಾಡದಿಂದ ಆಗಮಿಸಿದ 18 ಜನ ಕಲಾವಿದರಿರುವ ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ, ಸಾಂಪ್ರದಾಯಿಕ ಉಡುಪಿನಲ್ಲಿ ಕರ್ತವ್ಯ ಪಥದಲ್ಲಿ ಕಂಗೊಳಿಸಿದರು. ಇನ್ನುಳಿದ 10 ಜನ ಕಲಾವಿದರು ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಗಮನಸೆಳೆದರು.

    ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯ, ಮೆಟ್ಟಿಲು ಬಾವಿ ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ. ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ. 101 ಮೆಟ್ಟಿಲು ಬಾವಿಗಳು (ಕಲ್ಯಾಣಿ/ಪುಷ್ಕರಣಿ) ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸಿತು.

    ಇಲಾಖೆಯು 2022ರಲ್ಲಿ ಪ್ರದರ್ಶಿಸಿದ್ದ ‘ಸಾಂಪ್ರದಾಯಿಕ ಕಸೂತಿ ತೊಟ್ಟಿಲುʼಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡದ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೊಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.