ದಾವಣಗೆರೆ: ದಾವಣಗೆರೆ ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಮೆರವಣಿಗೆಯ ಮೇಲೆ ಕಲ್ಲುತೂರಾಟ ನಡೆಸಿದ್ದ 18 ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಆರೋಪಿಗಳನ್ನ ವಿಚಾರಣೆ ನಡೆಸಿದ ನ್ಯಾಯಾಧೀಶರು ಎಲ್ಲಾ 18 ಆರೋಪಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ದಾವಣಗೆರೆಯ ಬಸವ ನಗರ ಠಾಣೆಯಲ್ಲಿ ಈ ಕುರಿತು ಎರಡು ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿತ 18 ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಎಂಸಿಸಿಎ ಬ್ಲಾಕ್ ನಲ್ಲಿರುವ ಜಡ್ಜ್ ಪ್ರಶಾಂತ ನಿವಾಸದಲ್ಲಿ ಇದೀಗ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದಾರೆ.
ಸದ್ಯ 18 ಆರೋಪಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q