ಕಾವೇರಿ ನದಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಸೆಪ್ಟೆಂಬರ್ 6 ಕ್ಕೆ ವಿಚಾರಣೆ ಇದ್ದು, ಅಲ್ಲಿಯವರೆಗೂ ನೀರು ಹರಿಯುತ್ತದೆ. ಮೊದಲು ನೀರು ಹರಿಸುವುದನ್ನು ನಿಲ್ಲಿಸಿ ಆಮೇಲೆ ವಾದ ಮಾಡಬೇಕು ಎಂದು ಮಾಜಿ ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಸರ್ಕಾರ ತಮಿಳುನಾಡು ಎಷ್ಟು ನೀರು ಬಳಕೆ ಮಾಡಿದೆ ಅಂತ ವಾದ ಮಾಡಲು ತಯಾರಿಲ್ಲಾ. ಸರ್ಕಾರವೇ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕುಡಿಯೋ ನೀರಿನ ವಿಚಾರದಲ್ಲಿ ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಹೇಳಿದರು.
ತಮಿಳುನಾಡು ಕಾವೇರಿ ನೀರನ್ನು ಎಷ್ಟು ಬಳಸಿಕೊಂಡಿದೆ ಎಂದು ವಾದ ಮಾಡದೇ ಸರ್ಕಾರ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸೆಪ್ಟೆಂಬರ್ 6 ರಂದು ಕಾವೇರಿ ನೀರಿನ ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಕಾವೇರಿ ವಿಚಾರದಲ್ಲಿ ಸಿಡಬ್ಲೂಎಂಎ ಆದೇಶದಂತೆ ನೀರು ಬಿಡುತ್ತಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದಿರುವ ಬಗ್ಗೆ ಸಮಗ್ರವಾಗಿ ಯಾಕೆ ವಾದ ಮಾಡುತ್ತಿಲ್ಲವೊ ಗೊತ್ತಿಲ್ಲ ಎಂದರು.


