ಬೆಂಗಳೂರು: ಗ್ಯಾರೆಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗ್ತಿಲ್ಲ ಎನ್ನುವ ಕಾಂಗ್ರೆಸ್ ಶಾಸಕ ಗವಿಯಪ್ಪ ಹೇಳಿಕೆ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗರಂ ಆಗಿದ್ದಾರೆ.
ಕಾಂಗ್ರೆಸ್ ಶಾಸಕ ಗವಿಯಪ್ಪ, ಪಂಚ ಗ್ಯಾರೆಂಟಿಗಳಲ್ಲಿ ಎರಡು ಗ್ಯಾರೆಂಟಿಗಳನ್ನ ನಿಲ್ಲಿಸಿ ಎಂದು ಆಗ್ರಹಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಶಾಸಕರು, ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ ಎಂದರು.
ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ. ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q