ಮಧುಗಿರಿ : ಶಾಲೆಗಳಲ್ಲಿ ಶಿಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು. ಗೈರಾಗಿರುವುದು ನನ್ನ ಗಮನಕ್ಕೆ ಬಂದರೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ರವರು ಎಚ್ಚರಿಸಿದರು.
ಶಿಕ್ಷಕರಾದವರು ಪ್ರತಿ ಮಗುವಿನ ಮೇಲು ಗಮನವಿಡಬೇಕು. ಮಕ್ಕಳು ಗೈರು ಹಾಜರಾತಿ ಪಡೆದರೆ ಅದಕ್ಕೆ ಕಾರಣವನ್ನು ಪಡೆದು ಪೋಷಕರಿಗೆ ಮಾಹಿತಿಯನ್ನು ನೀಡಬೇಕು. ಮಕ್ಕಳು ಶಾಲೆಗೆ ಬಾರದಿದ್ದರೆ ಮಕ್ಕಳಿಗೆ ಒಂದು ದಿನದ ಪಾಠ ಮತ್ತೊಂದು ದಿನಕ್ಕೆ ಅರ್ಥವಾಗುವುದಿಲ್ಲ. ಆ ಮಗುವಿನ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತದೆ ಎಂದರು.
ಮಕ್ಕಳ ಜೊತೆ ಸಂವಾದ ನಡೆಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪ್ರತಿಯೊಬ್ಬರು ಶಾಲೆಗೆ ಹಾಜರಾಗಬೇಕು. ಶಿಕ್ಷಕರು ಹೇಳಿಕೊಟ್ಟ ಪಾಠವನ್ನು ಕಲಿಯಬೇಕು ಎಂದರು. ನಂತರ ಮಕ್ಕಳಿಗೆ ಮಗ್ಗಿ ಹಾಗೂ ಗಣಿತದ ಪಾಠವನ್ನು ಹೇಳಿಕೊಟ್ಟರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA