ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಸುದ್ದಿ ಹರಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಪರಮೇಶ್ವರ್, ‘ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಗೆ ಸಂಬಂಧಿಸಿದ ಪೋಸ್ಟ್ ಗಳಿಗಾಗಿ ಸರ್ಕಾರ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ. ಸಮಾಜದಲ್ಲಿ ಭಾವನೆಗಳನ್ನು ಕೆರಳಿಸುವ ಪೋಸ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಕೊಲೆ, ಅತ್ಯಾಚಾರ ಮತ್ತು ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐಟಿ) ಅನ್ನು ರಚಿಸಿದೆ. ಈ ಸಂಬಂಧ ಅನಾಮಧೇಯ ಮಾಜಿ ನೌಕರನೋರ್ವ ನೀಡಿದ ಮಾಹಿತಿ ಮೇರೆಗೆ ಅಸ್ತಿಪಂಜರಗಳ ಹೊರತೆಗೆಯುವ ಕೆಲಸ ಮಾಡಲಾಗುತ್ತದೆ.
ನಾವು ಇದನ್ನು ಗಮನಿಸುತ್ತಿದ್ದೇವೆ. ಅವರು ಯಾವುದೇ ರೀತಿಯಲ್ಲಿ ಸಮಾಜದಲ್ಲಿ ಭಾವನೆಗಳನ್ನು ಪ್ರಚೋದಿಸುತ್ತಿದ್ದರೆ, ನಾವು ಅವುಗಳನ್ನು ತಡೆಯಲು ಪ್ರಯತ್ನಿಸುತ್ತೇವೆ. ನಿಮಗೆ ತಿಳಿದಿರುವಂತೆ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ. ತಪ್ಪಾಗಿ ಪರಿಣಾಮ ಬೀರಬಹುದಾದ ಅಂತಹ ಪೋಸ್ಟ್‌ಗಳ ಮೇಲೆ ನಾವು ನಿಗಾ ಇಡುತ್ತೇವೆ ಎಂದು ಪರಮೇಶ್ವರ ಮಾಧ್ಯಮಗಳಿಗೆ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC