nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025

    ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

    November 24, 2025

    ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್

    November 24, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
    • ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
    • ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
    • ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
    • ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
    • ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
    • 450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ
    • ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಊರಾಚೆ ಗುಡಿಸಲಿನಲ್ಲಿ ಬಾಣಂತಿ ಹಾಗೂ ಮಗುವನ್ನು ಒಂಟಿಯಾಗಿ ಇರಿಸಿದ್ದ ತಪ್ಪಿಸ್ಥರ ವಿರುದ್ದ ಕಠಿಣ ಕ್ರಮ:  ನ್ಯಾ. ನೂರುನ್ನೀಸ
    ತುಮಕೂರು July 27, 2023

    ಊರಾಚೆ ಗುಡಿಸಲಿನಲ್ಲಿ ಬಾಣಂತಿ ಹಾಗೂ ಮಗುವನ್ನು ಒಂಟಿಯಾಗಿ ಇರಿಸಿದ್ದ ತಪ್ಪಿಸ್ಥರ ವಿರುದ್ದ ಕಠಿಣ ಕ್ರಮ:  ನ್ಯಾ. ನೂರುನ್ನೀಸ

    By adminJuly 27, 2023No Comments2 Mins Read
    gollarahatti

    ನಮ್ಮತುಮಕೂರು ವರದಿ: ಹೆರಿಗೆ ನಂತರ ಬಾಣಂತಿ ಜೊತೆಗೆ ಬೆಳ್ಳಾವಿ ಹೋಬಳಿ ಮಲ್ಲೇನಹಳ್ಳಿ ಊರಾಚೆ ಜಮೀನಿನ ಗುಡಿಸಲಿನಲ್ಲಿ ಇಡಲಾಗಿದ್ದ ನವಜಾತ ಶಿಶು ಅನಾರೋಗ್ಯದಿಂದ ಸಾವನ್ನಪ್ಪಿದ ಹಿನ್ನಲೆಯಲ್ಲಿ  ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ  ನ್ಯಾ.ನೂರುನ್ನೀಸ ಇಂದು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿ ಗ್ರಾಮಸ್ಥರು ಹಾಗೂ ಸ್ಥಳೀಯ ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

    ಮೃತ ಮಗುವಿನ ಪೋಷಕರ ಆಹವಾಲು ಸ್ವೀಕರಿಸಿದ ನ್ಯಾಯಾಧೀಶರು,  ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿ,  ಮಗು ಮೃತಪಟ್ಟ ನಂತರವೂ ಮೂರು ದಿನಗಳಿಂದ ಸುರಿಯುತ್ತಿರುವ ಜಡಿ ಮಳೆಯನ್ನು ಲೆಕ್ಕಿಸದೆ ತಾಯಿಯನ್ನು ಹಟ್ಟಿಯ ಒಳಗಡೆ ವಾಸ ಮಾಡಲು ಬೀಡದೆ ಊರಾಚೆಯ ಗುಡಿಸಿಲಿನಲ್ಲಿಯೇ ಒಂಟಿಯಾಗಿ ಇರಿಸಲಾಗಿರುವ ಮಾಹಿತಿ ಪಡೆದ ಅವರು,   ಗ್ರಾಮಸ್ಥರಿಗೆ ಕಾನೂನುಗಳ ತಿಳುವಳಿಕೆ ನೀಡಿ, ಗುಡಿಸಲನ್ನು  ಕೆಡವಿಸಿ, ಬಾಣಂತಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ  ಕೊಡಿಸಿದ ನ್ಯಾಯಾಧೀಶರು,  ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದರು.


    Provided by
    Provided by

    ಆರೋಗ್ಯದ ಹೆಚ್ಚಿನ ನಿಗಾ ಅವಶ್ಯಕತೆ ಇರುವ ಬಾಣಂತಿ ಮತ್ತು ಮಗುವನ್ನು ಊರಾಚೆಯ ಗುಡಿಸಲಿನಲ್ಲಿಯೇ ಇರಿಸಿದ ವಿಚಾರ  ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ಪ್ರಕರಣವಾಗಿದೆ, ಋತು ಚಕ್ರ ಹಾಗೂ ಬಾಣಂತಿ ಸಂದರ್ಭದಲ್ಲಿ ಹೆಣ್ಣುಮಕ್ಕಳು ಅಗತ್ಯ ವಿಶ್ರಾಂತಿ ಪಡೆದು, ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ ಆರೋಗ್ಯವಾಗಿರಲಿ ಎಂದು  ಹಿರಿಯರು  ಮಹಿಳೆಯರನ್ನು ಪ್ರತ್ಯೇಕವಾಗಿರಲಿ ಎಂದು ಆಚರಣೆ ತಂದಿದ್ದಾರೆ ಇಂದು ಈ ಅಚರಣೆ ತನ್ನ ಮೂಲ ಉದ್ದೇಶ ಮರೆತು ಮಹಿಳೆ ಮತ್ತು ಮಕ್ಕಳ ಜೀವನಕ್ಕೆ ಮಾರಕವಾಗಿ ಮೌಢ್ಯತೆಯಿಂದ ಕೂಡಿದ ಅಸ್ಪೃಶ್ಯತೆಯ ಆಚರಣೆಯಾಗಿದೆ, ಇಂತಹ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಹತ್ತಿರದಲ್ಲಿದ್ದು, ಬಾಣಂತಿ ಹಾಗೂ ಮಗುವಿಗೆ ಸ್ಪಂದಿಸಬೇಕು, ಅದನ್ನು ಬಿಟ್ಟು ಹೀಗೆ ಪ್ರತ್ಯೇಕವಾಗಿ ದೂರ ಇಟ್ಟರೆ ಅವರ ಆರೋಗ್ಯ ಕೆಟ್ಟು, ಈ ರೀತಿ ಸಾವಿಗೆ ಕಾರಣವಾಗುತ್ತದೆ, ಇಂತಹ ಆಚರಣೆ ನಾಗರಿಕ  ಹಕ್ಕುಗಳ ರಕ್ಷಣಾ ಕಾಯಿದೆ -೧೯೫೫ರ ರೀತ್ಯಾ ಹಾಗೂ ಇತರ ಕಾನೂನು ನಿಯಮಗಳಿಗೆ ವಿರುದ್ದವಾದದ್ದು ಎಂದರು, ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವ ಆಚರಣೆ ಸಂದರ್ಭದಲ್ಲೂ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಮುಂದುವರೆದಿದೆ. ಆಚಾರಗಳಿಗಿಂತ ಪ್ರಾಣ ಮುಖ್ಯ ಅನ್ನುವ ವಿಚಾರ ಯಾರೂ ಮರೆಯಬಾರದು. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ತಪ್ಪಿತಸ್ಥರ ವಿರುದ್ದ ಕಠಿಣ  ಕ್ರಮವಹಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು, ಈ ಬಗ್ಗೆ  ಸಮಗ್ರ ವರದಿಯನ್ನು ಮಹಿಳೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸಲ್ಲಿಸಲಾಗುತ್ತದೆ ಎಂದರು.

    ಸ್ವಚ್ಛತೆಗೆ ಆದ್ಯತೆ: ಬೆಳ್ಳಾವಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವಾರ್ಡ್ಗಳು, ಔಷಧಿ ಉಗ್ರಾಣ ಕೊಠಡಿ,  ಶೌಚಾಲಯಕ್ಕೆ ಭೇಟಿ ನೀಡಿದ ನ್ಯಾಯಾಧೀಶರು,   ಆಸ್ಪತ್ರೆಯಲ್ಲಿ ನೈರ್ಮಲ್ಯ ಕಾಪಾಡಬೇಕು ಎಂದು ತಾಕೀತು ಮಾಡಿದರು.

    ಕಾನೂನು ಅರಿವು: ಇದೇ ಸಂಧರ್ಭದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಮೂಲಕ ನಾಗರೀಕರಣ ಅಭಿಯಾನವನ್ನು ಹಮ್ಮಿಕೊಂಡು ಗ್ರಾಮಸ್ಥರಲ್ಲಿ ಕಾನೂನು ಅರಿವು ಮೂಡಿಸಲಾಯಿತು.

    ತಹಸೀಲ್ದಾರ್ ಸಿದ್ದೇಶ್ ಹಾಗೂ ಆರೋಗ್ಯ ಇಲಾಖೆಯ ನೌಕರರು ಗ್ರಾಮಸ್ಥರ ಮನವೊಲಿಸಿ, ಬಾಣಂತಿಯನ್ನು ಹಟ್ಟಿಗೆ ಕರೆ ತಂದರು.  ಈ ಹಿಂದೆ ಸ್ಥಳೀಯ ಅಧಿಕಾರಿಗಳು ಗುಡಿಸಲಿಗೆ ತೆರಳಿ ಬಾಣಂತಿ ಹಾಗೂ ಮಗುವನ್ನು ಮನೆಗೆ ಸೇರಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿರಲಿಲ್ಲ.

    ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಸೇವಾ ಕೇಂದ್ರದ ಅಧ್ಯಕ್ಷ ಸಿದ್ದಲಿಂಗೇಗೌಡ, ಹಿಂದುಳಿದ ಕಲ್ಯಾಣ ಇಲಾಖೆಯ ಮೇಲ್ವಿಚಾರಕ, ರವಿಕುಮಾರ್ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಇನ್ನಿತರರು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025

    ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

    November 24, 2025

    ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್

    November 24, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025

    ತುಮಕೂರು: ಲಯನ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್‌ ವತಿಯಿಂದ ವಿಶ್ವವಿದ್ಯಾಲಯದಲ್ಲಿ ಭಾನುವಾರ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು. 15ಕ್ಕೂ ಹೆಚ್ಚು…

    ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

    November 24, 2025

    ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್

    November 24, 2025

    ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ

    November 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.