ತುಮಕೂರು: ಜಿಲ್ಲೆಯ ಇರಕ ಸಂದ್ರ ಕಾಲೋನಿ, ಕೊಳವನಹಳ್ಳಿ ಗ್ರಾಮಗಳ ಗುಡಿಸಲು ನಿವಾಸಿಗಳು ಸೇರಿದಂತೆ ಜಿಲ್ಲೆಯ ಭೂಮಿ ವಸತಿ ವಂಚಿತರಿಂದ ನಿವೇಶನಗಳಿಗೆ ಹಕ್ಕು ಪತ್ರ ಮತ್ತು ಭೂ ಸಾಗುವಳಿ, ಖಾತೆ ಪಹಣಿ ಕುಡಿಯುವ ನೀರು ಮತ್ತು ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಯಿತು.
ಪ್ರತಿಭಟನಾಕಾರರ ಮನವೊಲಿಸಲು ತಡ ರಾತ್ರಿ 10 ಗಂಟೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ಥಳಕ್ಕೆ ಭೇಟಿ ನೀಡಿದರು.
ನಿರಾಶ್ರಿತರ ಬೇಡಿಕೆಗಳು ಈಡೇರುವವರೆಗೂ ಮುಷ್ಕರವನ್ನ ಕೈ ಬಿಡುವುದಿಲ್ಲ ಎಂದು ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ್ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರಕ್ಕೆ ನೂರಾರು ಮನವಿ ಸಲ್ಲಿಸಿದರು ಸಹ ನಿರಾಶ್ರಿತರ ಬೇಡಿಕೆಗಳನ್ನು ಬಗೆಹರಿಸುವಲ್ಲಿ ಅಧಿಕಾರಿ ವರ್ಗ ಮತ್ತು ಸರ್ಕಾರ ವಿಫಲವಾಗಿದೆ ಎಂದು ಎಂದು ಆಕ್ರೋಶ ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜು ಆಕ್ರೋಶ ವ್ಯಕ್ತಪಡಿಸಿದರು.
ಸುರಿಯುವ ಮಳೆಯಲ್ಲಿ ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಇಲ್ಲದೆ ನಿರಾಶ್ರಿತರು ಪರದಾಡುತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿಯೇ ವಿದ್ಯಾರ್ಥಿನಿಯೊಬ್ಬಳು ವಿದ್ಯಾಭ್ಯಾಸದಲ್ಲಿ ತೊಡಗಿದ್ದು ಗಮನ ಸೆಳೆಯಿತು.
ಸಮಸ್ಯೆ ಬಗ್ಗೆ ಹರಿಸುವವರೆಗೂ ಸ್ಥಳ ಬಿಡುವುದಿಲ್ಲ ಎಂದು ನಿರಾಶ್ರಿತರು ಘೋಷಣೆ ಕೂಗಿದರು. ಜಿಲ್ಲಾಧಿಕಾರಿಗಳು ಕೂಡಲೇ ಸಮಸ್ಯೆಯ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಲ್ಲಾ ತಾಲೂಕುಗಳ ತಹಶೀಲ್ದಾರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ಹೋರಾಟಗಾರರು ಆಗ್ರಹಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA