ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್.ಪಾವನ ಆತ್ಮಹತ್ಯೆಗೆ ಶರಣಾದವರಾಗಿದ್ದು, ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾವನ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿಯಾಗಿದ್ದು. ನಾನು ಗೆಳೆಯನೊಬ್ಬನನ್ನು ನಂಬಿದ್ದೆ, ಆತನಿಂದ ಮೋಸವಾಗಿದೆ. ಕ್ಷಮಿಸಿ ಅಪ್ಪ, ಅಮ್ಮ.. ಐ ಲವ್ ಯೂ ಎಂದು ಡೆತ್ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.
ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ವಿದ್ಯಾರ್ಥಿನಿ ಪಾವನ ಶವ ಶಿಫ್ಟ್ ಮಾಡಲಾಗಿದೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx